ಮೈಸೂರು: ಹಿಜಾಬ್ ಧರಿಸುವುದು ಇಸ್ಲಾಮ್ ಧರ್ಮದಲ್ಲಿ ಅಗತ್ಯ ಧಾರ್ಮಿಕ ಆಚರಣೆಗಳ ಭಾಗವಲ್ಲ ಎಂಬ ಹೈಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿ ಇಮಾರತ್ ಎ ಶರೀಅ ನೀಡಿರುವ ಕರ್ನಾಟಕ ಬಂದ್ ಕರೆಗೆ ಮೈಸೂರಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಜಿಲ್ಲೆಯಲ್ಲಿ ಮುಸ್ಲಿಂ ವರ್ತಕರು ತಮ್ಮ ವ್ಯಾಪಾರ ವಹಿವಾಟುಗಳ ಮುಚ್ಚಿ ಬಂದ್’ಗೆ ಬೆಂಬಲ ಸೂಚಿಸಿದ್ದು, ಬಸ್, ಆಟೋ ರಿಕ್ಷಾ, ಟ್ಯಾಕ್ಸಿಗಳು ಸಂಚಾರ ನಿಲ್ಲಿಸಿ ಬೆಂಬಲ ನೀಡಿದರು.
ಮೈಸೂರು ನಗರದ ಮೀನಾ ಬಜಾರ್, ಸೇರಿದಂತೆ ನಗರದ ಅನೇಕ ಬೀದಿಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳು ಬಂದ್ ಮಾಡಿದ್ದಾರೆ.