ಲಖನೌ : ಮಧ್ಯಪ್ರದೇಶದ ಬಳಿಕ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರಕಾರ ಕೂಡ ‘ಲವ್ ಜಿಹಾದ್’ ವಿರುದ್ಧ ಕಠಿಣ ಕಾನೂನು ಜಾರಿಗೆ ತರಲು ಉದ್ದೇಶಿಸಿದೆ. ಈ ಸಂಬಂಧ ಗೃಹ ಸಚಿವಾಲಯವು ಕಾನೂನು ಸಚಿವಾಲಯಕ್ಕೆ ಪ್ರಸ್ತಾಪವೊಂದನ್ನು ಕಳಹಿಸಿದೆ ಎಂದು ಮೂಲಗಳು ತಿಳಿಸಿವೆ.
ಕೋಮು ಸೌಹಾರ್ಧತೆಗೆ ಧಕ್ಕೆ ತರುವ ಇಂತಹ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸರಕಾರವು ಈ ಬಗ್ಗೆ ಕಾನೂನು ರಚಿಸಲು ಯೋಜಿಸಿದೆ ಮತ್ತು ಪ್ರಕ್ರಿಯೆ ಆರಂಭಿಸಿದೆ ಎಂದು ಉತ್ತರ ಪ್ರದೇಶ ಕಾನೂನು ಸಚಿವ ಬ್ರಿಜೇಶ್ ಪಾಠಕ್ ತಿಳಿಸಿದ್ದಾರೆ.
ಕೇಂದ್ರ ಸರಕಾರವು ಸ್ವತಃ ‘ಲವ್ ಜಿಹಾದ್’ ಎಂಬುದು ಇಲ್ಲ ಎಂದು ಸ್ಪಷ್ಟಪಡಿಸಿದ್ದರೂ, ಸ್ವತಃ ಬಿಜೆಪಿ ಸರಕಾರಗಳು ಈ ಬಗ್ಗೆ ಕಾನೂನು ಮಾಡಲು ಹೊರಟಿವೆ. ಇದಕ್ಕೂ ಮೊದಲು ಕರ್ನಾಟಕ, ಮಧ್ಯಪ್ರದೇಶದಲ್ಲೂ ‘ಲವ್ ಜಿಹಾದ್’ ವಿರುದ್ಧ ಕಾನೂನು ರಚಿಸುವ ಬಗ್ಗೆ ಪ್ರಸ್ತಾಪಿಸಲಾಗಿತ್ತು.