ಕಾಶ್ಮೀರ ಫೈಲ್ಸ್ ಸಿನಿಮಾ ಭಾರತದಲ್ಲಿ ಮುಸ್ಲಿಮರ ನರಮೇಧಕ್ಕೆ ನಾಂದಿ ಹಾಡುವ ಸಾಧ್ಯತೆ: PFI ವಾಗ್ದಾಳಿ

Prasthutha|

ನವದೆಹಲಿ: ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ವಿವಾದಿತ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಕುರಿತು ಪ್ರತಿಕ್ರಿಯಿಸಿದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಭಾರತದಲ್ಲಿ ಮುಸ್ಲಿಮರ ನರಮೇಧಕ್ಕೆ ನಾಂದಿ ಹಾಡುವ ಸಾಧ್ಯತೆಯಿದ್ದು, ಇದಕ್ಕೆ ಸಿನಿಮಾ ನಿರ್ಮಾಪಕರೆ ನೇರ ಜವಾಬ್ದಾರರು ಎಂದು ಎಚ್ಚರಿಸಿದೆ.

- Advertisement -

ದಿ ಕಾಶ್ಮೀರ ಫೈಲ್ಸ್ ಸಿನಿಮಾಕ್ಕೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಪ್ರತಿಕ್ರಿಸಿದ PFI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನೀಶ್ ಅಹ್ಮದ್, ಭಾರತದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹತ್ಯಾಕಾಂಡವನ್ನು ದ್ವಿಗುಣಗೊಳಿಸುವ ಉದ್ದೇಶದೊಂದಿದೆ ಈ ಸಿನಿಮಾವನ್ನು ಪ್ರೊಜೆಕ್ಟ್ ಮಾಡಲಾಗುತ್ತಿದೆ. ಸಿನಿಮಾ ವೀಕ್ಷಿಸಿದ ಹೆಚ್ಚಿನವರು ಮುಸ್ಲಿಮರ ವಿರುದ್ಧದ ಹತ್ಯೆಗೆ ಕರೆ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ದೇಶದಲ್ಲಿ ಮುಸ್ಲಿಮರ ಹತ್ಯಾಕಾಂಡ ನಡೆದರೆ ಅದಕ್ಕೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತು ನಟರು ಕೂಡ ಜವಾಬ್ದಾರರಾಗಿರುತ್ತಾರೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.



Join Whatsapp