ಕಾಪು: ಮಾರಿ ಪೂಜೆ ಸಂದರ್ಭದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಅವಕಾಶ ನೀಡಬೇಡಿ ಎಂದು ಮನವಿ ಮಾಡುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಾರ್ಚ್ 22,23 ರಂದು ನಡೆಯುವ ಸುಗ್ಗಿ ಮಾರಿ ಪೂಜೆಯ ಸಂದರ್ಭದಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂಬ ಪತ್ರ ಪುರಸಭೆಯ ಮುಖ್ಯಾಧಿಕಾರಿಗೆ ಬರೆಯಲಾಗಿದೆ. ಹಿಂದೂ ಕಾರ್ಯಕರ್ತರು ಈ ಪತ್ರವನ್ನು ಬರೆದು ಅಂಗಡಿ ಸ್ಟಾಲ್’ಗೆ ಅವಕಾಶ ನೀಡಬಾರದೆಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಪುರಸಭೆಯ ಅಧಿಕಾರಿ ಮನವಿ ಬಂದಿರುವುದು ಹೌದು. ಆದರೆ ಭಾರತ ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಇಲ್ಲಿ ಎಲ್ಲರಿಗೂ ವ್ಯಾಪಾರ ಮಾಡುವ ಅವಕಾಶವಿದೆ ಎಂದು ಹೇಳಿದ್ದಾರೆ.