ತುಮಕೂರು ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

Prasthutha|

ತುಮಕೂರು: ಇಲ್ಲಿನ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದ ಬಳಿ ಸಂಭವಿಸಿದ ಬಸ್ ಅಪಘಾತದಲ್ಲಿ ಮೃತಪಟ್ಟಿರುವವರ ಕುಟುಂಬಕ್ಕೆ ಸರಕಾರ 5 ಲಕ್ಷ ರೂ. ಪರಿಹಾರ ಘೋಷಿಸಿದೆ. 

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸಾರಿಗೆ ಸಚಿವ ಬಿ.ಶ್ರೀರಾಮುಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಚರ್ಚೆ ನಡೆಸಿ, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದೇವೆ. ಅಲ್ಲದೆ ವೈಯಕ್ತಿಕವಾಗಿ ಮೃತರ ಕುಟುಂಬಗಳಿಗೆ 1 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೀಡುವುದಾಗಿ ತಿಳಿಸಿದರು.  



Join Whatsapp