ಕಾರವಾರ: ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಲ್ಲಿ ಒಂದಷ್ಟು ಮದರಸಾಗಳನ್ನು ಶಿಕ್ಷಣ ಪದ್ಧತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ. ಆದರೆ, ಈ ಬಗ್ಗೆ ಸದ್ಯಕ್ಕೆ ಯಾವ ಯೋಚನೆಯೂ ಇಲ್ಲ’ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತ ಸಮುದಾಯದ ಮಕ್ಕಳು, ಮದರಸಾ ಶಿಕ್ಷಣದಿಂದಾಗಿ ಇವತ್ತಿನ ಶಿಕ್ಷಣ ಪದ್ಧತಿಯಿಂದ ದೂರ ಇರಬಾರದು. ಅವರೂ ನಮ್ಮ ಇತರ ಎಲ್ಲ ಮಕ್ಕಳಂತೆ ಈಗಿನ ಶಿಕ್ಷಣ ಪದ್ಧತಿಯಲ್ಲಿ ವಿದ್ಯಾವಂತರಾಗಿ ಸಮಾಜದಲ್ಲಿ ಮುಂದೆ ಬರಬೇಕು. ಈ ಕಾರಣದಿಂದ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸುತ್ತೇವೆ ಎಂದು ತಿಳಿಸಿದರು.
ಇಂದಿನ ಶಿಕ್ಷಣ ಪದ್ಧತಿಯ ಅಗತ್ಯದ ಬಗ್ಗೆ ಅಲ್ಪಸಂಖ್ಯಾತ ಸಮುದಾಯದ ನಾಯಕರ ಗಮನಕ್ಕೂ ಬಂದಿದೆ. ಮದರಸಾಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿದ್ದು, ಶಾಲೆಗಳಿಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇವತ್ತಿನ ಪ್ರಪಂಚದಲ್ಲಿ ಬದುಕಲು ಈ ಶಿಕ್ಷಣ ಪದ್ಧತಿ ಅಗತ್ಯ ಎಂದು ಹೇಳಿದರು.