ಮಂಗಳೂರು: ಮಾರ್ಚ್ ತಿಂಗಳ ಅಂತ್ಯದವರೆಗೂ ಶಾಲಾ-ಕಾಲೇಜುಗಳ ಸುತ್ತಮುತ್ತ ನಿಷೇಧಾಜ್ಞೆ ವಿಸ್ತರಣೆ

Prasthutha|

ಮಂಗಳೂರು: ಕರಾವಳಿ ಭಾಗದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲಿನ ವಿಚಾರವಾಗಿ ತಲೆದೋರಿದ್ದ ಸಮಸ್ಯೆ ಹಿನ್ನೆಲೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಮತ್ತೆ ವಿಸ್ತರಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.

- Advertisement -

ಮಾರ್ಚ್ 21ರ ಬೆಳಿಗ್ಗೆ 6 ಗಂಟೆಯಿಂದ ಮಾರ್ಚ್ 31ರ ಸಾಯಂಕಾಲ 6ಗಂಟೆ ವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆಯನ್ನು ವಿಧಿಸಿ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಆದೇಶವಿತ್ತಿದ್ದಾರೆ. ಇದರ ಪ್ರಕಾರ, ಶಾಲಾ ಕಾಲೇಜು ಹಾಗೂ ಶೈಕ್ಷಣಿಕ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ.

ಐದು ಹಾಗೂ ಅದಕ್ಕಿಂತ ಹೆಚ್ಚು ಜನ ಸೇರುವಿಕೆ, ಭಿತ್ತಿಪತ್ರ ಪ್ರದರ್ಶನ, ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯುವುದು, ಪ್ರಚೋದನಕಾರಿ ಭಾಷಣ, ಶಾಂತಿಗೆ ಭಂಗ ತರುವಿಕೆ ಚಟುವಟಿಕೆಗಳನ್ನು ನಿಷೇಧಿಸಿ ಆದೇಶಿಸಲಾಗಿದೆ.



Join Whatsapp