ಜಾಮಿಯಾ ಮಿಲಿಯಾ ಇಸ್ಲಾಮಿಯಾ ಉಪಕುಲಪತಿ ನಜ್ಮಾ ಅಖ್ತರ್ ಅವರಿಗೆ ಇಂದು ಪದ್ಮಶ್ರೀ ಪ್ರಶಸ್ತಿ ಪ್ರದಾನ

Prasthutha|

ನವದೆಹಲಿ: ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ಉಪಕುಲಪತಿ ಪ್ರೊಫೆಸರ್ ನಜ್ಮಾ ಅಖ್ತರ್ ಅವರು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಯನ್ನು ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಮಾರ್ಚ್ 21 ರಂದು ಸೋಮವಾರ ಸ್ವೀಕರಿಸಲಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಸೋಮವಾರದಂದು ನಡೆಯಲಿದೆ. ಭಾರತ ಸರ್ಕಾರ (GoI) ಪ್ರೊ ಅಖ್ತರ್ ಅವರನ್ನು ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅವರ ಅಮೂಲ್ಯ ಕೊಡುಗೆಗಾಗಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.

- Advertisement -

ಪ್ರೊ ನಜ್ಮಾ ಅಖ್ತರ್ ಅವರು ಕಳೆದ ವರ್ಷ ಡಿಸೆಂಬರ್‌ ನಲ್ಲಿ ತಮ್ಮ ಮೇಲ್ವಿಚಾರಣೆಯಲ್ಲಿ ರಾಷ್ಟ್ರೀಯ ಮಾನ್ಯತೆ ಮತ್ತು ಮೌಲ್ಯಮಾಪನ ಮಂಡಳಿಯಿಂದ (NAAC) A++ ನೊಂದಿಗೆ ಮಾನ್ಯತೆ ಪಡೆದ ಜೆಎಂಐ -ಯ ಮೊದಲ ಮಹಿಳಾ ಉಪಕುಲಪತಿ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ. ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣದ ವಿತರಣೆಯಲ್ಲಿ ಪರಿವರ್ತನೆ ತಂದ ಕಾರಣಕ್ಕಾಗಿ ಅವರು ಪ್ರಮುಖ ಶಿಕ್ಷಣತಜ್ಞರಾಗಿ ವ್ಯಾಪಕವಾಗಿ ಗುರುತಿಸಲ್ಪಟ್ಟಿದ್ದಾರೆ.



Join Whatsapp