ಸೇನೆಗೆ ಸೇರುವ ಸಲುವಾಗಿ ಮಧ್ಯರಾತ್ರಿ ರಸ್ತೆಬದಿಯಲ್ಲಿ ಓಡುತ್ತಿದ್ದ ಯುವಕನಿಗೆ ಸೇನಾಧಿಕಾರಿಯಿಂದ ಬಂಪರ್ ಆಫರ್ !

Prasthutha|

ನೋಯ್ಡಾ: 19 ವರ್ಷದ ಯುವಕ ಕೆಲಸ ಮುಗಿಸಿ ಮಧ್ಯರಾತ್ರಿ ಬರೋಬ್ಬರಿ 10 ಕಿಲೋ ಮೀಟರ್ ಓಡುತ್ತಲೇ ಮನೆ ಸೇರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಈತನಿಗೆ ಅದೃಷ್ಟ ಒಲಿದು ಬಂದಿದೆ.

- Advertisement -

ಈ ಬಗ್ಗೆ ನಿವೃತ್ತ ಜನರಲ್ ಸತೀಸ್ ದುವಾ ಟ್ವೀಟ್ ಮಾಡಿದ್ದು, ಪ್ರದೀಪ್ ಮೆಹ್ರಾಗೆ ಭಾರತೀಯ ಸೇನೆ ಸೇರಲು ಸಕಲ ರೀತಿಯ ತರಬೇತಿ ನೀಡಲು ಸಿದ್ಧರಾಗಿರುವುದಾಗಿ ಹೇಳಿದ್ದಾರೆ.

‘ಭಾರತೀಯ ಸೇನೆ ಸೇರಲು ದೈಹಿಕವಾಗಿ ಸದೃಢರಾಗಿರಬೇಕು. ಬೆಳಗ್ಗೆ ವ್ಯಾಯಾಮ, ಜಾಗಿಂಗ್, ಜಿಮ್ ಗೆ ಹೋಗಲು ನನ್ನ ಬಳಿ ಸಮಯವಿಲ್ಲ. ಹಾಗಾಗಿ, ಮಧ್ಯರಾತ್ರಿವರೆಗೂ ಕೆಲಸ ಮಾಡುತ್ತೇನೆ. ನಂತರ ಮನೆಗೆ ಓಡುತ್ತಲೇ ಹಿಂತಿರುಗುತ್ತೇನೆ. ಸಿಗುವ ವೇತನದಲ್ಲೇ ತಾಯಿಯ ಆರೋಗ್ಯ ನೋಡಿಕೊಳ್ಳಬೇಕು, ಮನೆ ಖರ್ಚು ನಿಭಾಯಿಸಬೇಕು. ಜೊತೆಗೆ ನನ್ನ ದೇಹವನ್ನು ಫಿಟ್ ಆಗಿ ಇಟ್ಟುಕೊಳ್ಳಬೇಕೆಂದು ಪ್ರತಿ ರಾತ್ರಿ ನಗರದ ರಸ್ತೆಗಳಲ್ಲಿ 10 ಕಿ.ಮೀ ಓಡುವ ಮೂಲಕ ಆರ್ಮಿ ಸೇರಿಕೊಳ್ಳಲು ತಯಾರಿ ನಡೆಸುತ್ತಿದ್ದೇನೆ’ ಎಂದು ಯುವಕ ಹೇಳಿಕೊಂಡಿದ್ದ. ಈ ವಿಡಿಯೋ ತುಣುಕನ್ನು ಚಿತ್ರ ನಿರ್ಮಾಪಕ ವಿನೋದ್ ಕಪ್ರಿ ಟ್ವೀಟ್ ಮಾಡಿದ್ದರು.



Join Whatsapp