ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಅರ್ಜಿ ತೀರ್ಪು ಮುಂದೂಡಿಕೆ

Prasthutha|

ನವದೆಹಲಿ: ಫೆಬ್ರವರಿ, 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬಂಧಿತ ಜೆ.ಎನ್.ಯು ಮಾಜಿ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪನ್ನು ಮಾರ್ಚ್ 23ಕ್ಕೆ ಮುಂದೂಡಿದೆ.

- Advertisement -

ಈ ಕುರಿತ ಸೋಮವಾರ ನೀಡಬೇಕಿದ್ದ ತೀರ್ಪನ್ನು ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಅಮಿತಾಬ್ ರಾವತ್ ಅವರು ಪ್ರತಿಕ್ರಿಯಿಸಿ ಆದೇಶದ ಪ್ರತಿ ಇನ್ನೂ ರೆಡಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಮಾರ್ಚ್ 23 ರಂದು ಆದೇಶ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಈಶಾನ್ಯ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ನಾಗರಿಕ ನೋಂಧಣಿ (ಎನ್.ಆರ್. ಸಿ) ವಿರುದ್ಧದ ಪ್ರತಿಭಟನೆಯು ಭಾರೀ ಹಿಂಸೆಯ ಕಡೆಗೆ ವಾಲಿತ್ತು. ಈ ಗಲಭೆಯಲ್ಲಿ 53 ಮಂದಿ ಸಾವನ್ನಪ್ಪಿದ್ದು, ಸುಮಾರು 700 ಮಂದಿ ಗಾಯಗೊಂಡಿದ್ದರು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್ ಖಾಲಿದ್ ಸೇರಿದಂತೆ ಇತರರ ವಿರುದ್ಧ ಭಯೋತ್ಪಾದನಾ ನಿಗ್ರಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.




Join Whatsapp