ಆಗಸ್ಟ್ ನಲ್ಲಿ ಕೊರೋನಾ 4ನೇ ಅಲೆ: ಡಾ.ಕೆ.ಸುಧಾಕರ್

Prasthutha|

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಕೋವಿಡ್ ನಾಲ್ಕನೆ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement -

ವಿಧಾನ ಪರಿಷತ್ತಿನ ಶೂನ್ಯ ವೇಳೆಯಲ್ಲಿ ಬಿಜೆಪಿಯ ಶಿಶಿಲ್ ನಮೋಷಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ ರೂಪಾಂತರ ಉಪತಳಿ ಬಿಎ-2 ಪಿಲಿಫೈನ್ಸ್‍ನ ಲ್ಲಿ ಕಾಣಿಸಿಕೊಂಡು ನಂತರ 40 ದೇಶಗಳಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಮೂರನೇ ಅಲೆ ಕಾಣಿಸಿಕೊಳ್ಳುವ ಮುನ್ಸೂಚನೆ ನೀಡಿದ ಸಂಸ್ಥೆಯೇ ಇದೀಗ 4ನೇ ಅಲೆ ಆಗಸ್ಟ್‍ ನಿಂದ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು. 

ಆಗಸ್ಟ್ ನಲ್ಲಿ ಕಾಣಿಸಿಕೊಳ್ಳುವ 4ನೆ ಅಲೆಯ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.




Join Whatsapp