ಬೆಂಗಳೂರು: ಹೈಕೋರ್ಟ್ ನೀಡಿರುವ ಹಿಜಾಬ್ ಪ್ರಕರಣದ ತೀರ್ಪು ವಿರೋಧಿಸಿ ರಾಜ್ಯದ ಕೆಲ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರ ಮಾಡಿದ್ದು, ಯಾವುದೇ ಕಾರಣಕ್ಕೂ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪರೀಕ್ಷೆಗಳಿಗೆ ಗೈರು ಹಾಜರಾದವರಿಗೆ ಮರು ಪರೀಕ್ಷೆ ನಡೆಸುವ ಯಾವುದೇ ವ್ಯವಸ್ಥೆ ಇಲ್ಲ. ಪರೀಕ್ಷೆಗಳಲ್ಲಿ ಫೇಲ್ ಆದವರಿಗೆ ಮಾತ್ರ ಪೂರಕ ಪರೀಕ್ಷೆ ತೆಗೆದುಕೊಳ್ಳಲು ಅವಕಾಶವಿದೆ. ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಗೈರು ಹಾಜರಾದವರಿಗೆ ಯಾವುದೇ ಕಾರಣಕ್ಕೂ ಮರು ಪರೀಕ್ಷೆ ಇಲ್ಲ. ಅಂತಹ ವ್ಯವಸ್ಥೆ ನಮ್ಮಲ್ಲಿ ಇಲ್ಲ ಎಂದು ತಿಳಿಸಿದರು.