ಜನನ-ಮರಣ ಪ್ರಮಾಣ ಪತ್ರ ಮನೆ ಬಾಗಿಲಿಗೆ: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೂತನ ಯೋಜನೆ ಜಾರಿ

Prasthutha|

ಮಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಂಚೆ ಮೂಲಕ ಜನನ-ಮರಣ ಪ್ರಮಾಣ ಪತ್ರವನ್ನು ಮನೆ ಬಾಗಿಲಿಗೆ ತಲುಪಿಸುವ ಸೇವೆ ಮಂಗಳೂರಿನಲ್ಲಿ ಆರಂಭಗೊಂಡಿದ್ದು, ಸಾರ್ವಜನಿಕರು ಯೋಜನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.

- Advertisement -


ಮಂಗಳೂರು ಮಹಾನಗರ ಪಾಲಿಕೆ ಮತ್ತು ಭಾರತೀಯ ಅಂಚೆ ಇಲಾಖೆ ಈ ಸಂಬಂಧ ಪರಸ್ವರ ಒಪ್ಪಂದ ಮಾಡಿಕೊಂಡಿವೆ. ಇನ್ನು ಮುಂದೆ ಜನನ-ಮರಣ ಪ್ರಮಾಣ ಪತ್ರಕ್ಕೆ ನಗರಪಾಲಿಕೆ ಕಚೇರಿಗೆ ಅಲೆದಾಡುವ ಅಗತ್ಯವಿಲ್ಲ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.


ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸುವ ವೇಳೆಯೇ ಅಂಚೆ ಮೂಲಕ ಪ್ರಮಾಣ ಪತ್ರ ಪಡೆಯುವ ಕಾಲಂ ಭರ್ತಿ ಮಾಡಿ ನೀಡಿದರೆ ಅರ್ಜಿದಾರರ ವಿಳಾಸಕ್ಕೆ ಅಂಚೆ ಮೂಲಕ ಪತ್ರರವಾನೆಯಾಗುತ್ತದೆ. ದೂರದ ಊರಿನವರಿಗೆ ಈ ಸೇವೆಯಿಂದ ಅನುಕೂಲ ಆಗಲಿದೆ ಎಂದರು.

- Advertisement -


ನಗರ ಪಾಲಿಕೆಯಲ್ಲಿ ಪ್ರಮಾಣಪತ್ರ ಸಿದ್ಧಗೊಂಡ 2 ರಿಂದ 5 ದಿನಗಳ ಒಳಗೆ ಸ್ಪೀಡ್ ಪೋಸ್ಟ್ ಮೂಲಕ ಅರ್ಜಿದಾರರ ವಿಳಾಸಕ್ಕೆ ತಲುಪಿಸಲಾಗುತ್ತದೆ. ರವಾನೆಯಿಂದ ಬಟವಾಡೆಯವರೆಗೆ ವಿವಿಧ ಹಂತಗಳಲ್ಲಿ ಅರ್ಜಿದಾರರಿಗೆ ಎಸ್ಎಂಎಸ್ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದು ಅಂಚೆ ಇಲಾಖೆಯ ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.




Join Whatsapp