ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

Prasthutha|

ರಾಂಚಿ: ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್ ಗೆ ಕರೆದೊಯ್ಯಲಾಗಿದೆ. ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ದೆಹಲಿಗೆ ಲಾಲೂ ಅವರನ್ನು ಶಿಫ್ಟ್ ಮಾಡಲಾಗಿದೆ.

- Advertisement -

ಹೃದಯ ಮತ್ತು ಮೂತ್ರಪಿಂಡದಲ್ಲಿ ಸಮಸ್ಯೆಗಳಿಂದ ಬಳಲುತ್ತಿರುವ ಲಾಲೂ ಯಾದವ್ ಅವರಿಗೆ ಹೆಚ್ಚುವರಿ ಚಿಕಿತ್ಸೆಯ ಅವಶ್ಯಕತೆಯಿದ್ದು ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಗೆ ಕಳುಹಿಸಲಾಗುತ್ತಿದೆ” ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಕಾಮೇಶ್ವರ ಪ್ರಸಾದ್ ಮಾಹಿತಿ ನೀಡಿದ್ದಾರೆ.




Join Whatsapp