ಮಡಿಕೇರಿ: ಸಿದ್ದಾಪುರ ಸಮೀಪದ ಕರಡಿಗೋಡು ಕಾವೇರಿ ನದಿ ದಡದಲ್ಲಿ ರಾಶಿಗಟ್ಟಲೆ ತ್ಯಾಜ್ಯ ಸುರಿದಿರುವ ಘಟನೆ ವರದಿಯಾಗಿದೆ.
ಬಿಯರ್ ಬಾಟಲಿಗಳು, ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯಗಳನ್ನು ಬೇಕಾಬಿಟ್ಟಿ ಸುರಿದಿದ್ದು, ಕಾವೇರಿ ನದಿ ಪಾವಿತ್ರತೆಗೆ ಧಕ್ಕೆ ಆಗಿದೆ ಎಂದು ಕರಡಿಗೋಡು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ದಂಡ ವಿಧಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ಕೃಷ್ಣ ಸಿದ್ದಾಪುರ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತಿಗೆ ದೂರು ನೀಡಿದ್ದಾರೆ. ಸಿದ್ದಾಪುರ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಪಿಡಿಓ ಘಟನಾ ಸ್ಥಳಕ್ಕೆ ತೆರಳಿದ್ದಾರೆ.