ಉತ್ತರಾಖಂಡ: ದ್ವಿತೀಯ ಬಾರಿಗೆ ಮುಖ್ಯಮಂತ್ರಿಯಾಗಿ ಇಂದು ಪುಷ್ಕರ್ ಧಾಮಿ ಪ್ರಮಾಣ ವಚನ

Prasthutha|

ರಾಂಚಿ: ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬುಧವಾರ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪುಷ್ಕರ್ ಸಿಂಗ್ ಧಾಮಿ ಅವರು ದ್ವಿತೀಯ ಬಾರಿಗೆ ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

- Advertisement -

ಮಾತ್ರವಲ್ಲ ಧಾಮಿ ಅವರೊಂದಿಗೆ ಇತರೆ ಎಂಟು ಶಾಸಕರು ಸಚಿವರಾಗಿ ಅಧಿಕಾರ ವಹಿಸಿದ್ದು, ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಗುರ್ಮಿತ್ ಸಿಂಗ್ ಅವರು ಪ್ರಮಾಣ ವಚನ ಬೋದಿಸಿದ್ದಾರೆ.

ಧಾಮಿ ಅವರ ನಾಯಕತ್ವದಲ್ಲಿ ಬಿಜೆಪಿ ಚುನಾವಣೆ ಎದುರಿಸಿದ್ದು, ಖತಿಮಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಧಾಮಿ ಅವರು ಪರಾಭವಗೊಂಡಿದ್ದರು.

- Advertisement -

ಸದ್ಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಪುಷ್ಕರ್ ಸಿಂಗ್ ಧಾಮಿ ಅವರು ಮುಂದಿನ ಆರು ತಿಂಗಳೊಳಗೆ ಚುನಾವಣೆಯಲ್ಲಿ ಜಯಗಳಿಸಿ ವಿಧಾನಸಭೆಗೆ ಆಯ್ಕೆಯಾಗಲೇಬೇಕು.

ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಇತರೆ ಶಾಸಕರೆಂದರೆ ಸತ್ಪಾಲ್ ಮಹಾರಾಜ್, ಧನ್ ಸಿಂಗ್ ರಾವತ್, ಸುಬೋದ್ ಉನಿಯಾಲ್, ಪ್ರೇಮ್ ಚಂಡ್ ಅಗರ್ವಾಲ್, ರೇಖಾ ಆರ್ಯ, ಗಣೇಶ್ ಜೋಷಿ, ಚಂದನ್ ರಾಮ್ ದಾಸ್ ಮತ್ತು ಸೌರಭ್ ಬಹುಗುಣ ಎಂಬವರಾಗಿದ್ದಾರೆ.

ಅದ್ದೂರಿಯಾಗಿ ನಡೆದ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಮತ್ತು ಹಲವು ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳು ಭಾಗವಹಿಸಿದ್ದರು.




Join Whatsapp