ಶಿವಮೊಗ್ಗ: ಹೈಕೋರ್ಟ್ ತೀರ್ಪು ನೆಪದಲ್ಲಿ ಪದವಿ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶ ನಿರಾಕರಣೆ ವಿರೋಧಿಸಿ ಪ್ರತಿಭಟನೆ

Prasthutha|

ಶಿವಮೊಗ್ಗ: ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ತೀರ್ಪಿಗೆ ಅಸಮ್ಮತಿ ಸೂಚಿಸಿ ಮುಸ್ಲಿಮ್ ವಿದ್ಯಾರ್ಥಿನಿಯರು ಬುಧವಾರ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.

- Advertisement -


ಹೈಕೋರ್ಟ್ ತೀರ್ಪನ್ನು ಮುಂದಿಟ್ಟು ಶಿವಮೊಗ್ಗದ ಪದವಿ ಕಾಲೇಜುಗಳಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಲಾಗುತ್ತಿದೆ. ಹಿಜಾಬ್ ಹೆಸರಿನಲ್ಲಿ ಪರೀಕ್ಷೆ ಮತ್ತು ತರಗತಿಯಿಂದ ನಮ್ಮನ್ನು ಹೊರಗಿಡಲಾಗಿದೆ. ಕಳೆದ ಒಂದೂವರೆ ತಿಂಗಳಿಂದ ನಮ್ಮನ್ನು ತರಗತಿಗಳಿಗೆ ಸೇರಿಸುತ್ತಿಲ್ಲ. ಪದವಿಯಲ್ಲಿ ಸಮವಸ್ತ್ರ ನಿಯಮವಿಲ್ಲ ಎಂದು ಸ್ವತಃ ಉನ್ನತ ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದರೂ ಕಾಲೇಜಿನ ಪ್ರಾಂಶುಪಾಲರು ನಮ್ಮ ವಿದ್ಯಾಭ್ಯಾಸಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

- Advertisement -


ಹಿಜಾಬ್ ಬೇಕಾದವರು ಪಾಕಿಸ್ತಾನಕ್ಕೆ ಹೋಗಿ, ಇರಾನ್ ಗೆ ಹೋಗಿ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಈ ದೇಶಕ್ಕಾಗಿ ನಮ್ಮ ಹಿರಿಯರು ರಕ್ತ ಹರಿಸಿದ್ದಾರೆ. ಇಲ್ಲೇ ಹುಟ್ಟಿದ್ದೇವೆ, ಇಲ್ಲೇ ಸಾಯುತ್ತೇವೆ. ನಮ್ಮ ಹಕ್ಕನ್ನು ಕೇಳಿದರೆ ದೇಶದ್ರೋಹಿಗಳೆಂದು ಕರೆಯುತ್ತಿದ್ದಾರೆ. ಇದೆಂಥ ನ್ಯಾಯ ಎಂದು ವಿದ್ಯಾರ್ಥಿಯೊಬ್ಬರು ಪ್ರಶ್ನಿಸಿದರು.

ನಮಗೆ ಹಿಜಾಬ್ ನೊಂದಿಗೆ ಶಿಕ್ಷಣ ಪಡೆಯಲು ಅವಕಾಶ ನೀಡಬೇಕು. ಪರೀಕ್ಷೆಯನ್ನು ಮುಂದೂಡಬೇಕು ಎಂದು ವಿದ್ಯಾರ್ಥಿನಿಯರು ಆಗ್ರಹಿಸಿದರು. ಬಳಿಕ ಸ್ಥಳೀಯ ಠಾಣೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಮನವಿ ಸ್ವೀಕರಿಸಿದರು.



Join Whatsapp