2ನೇ ಉಪ ಲೋಕಾಯಕ್ತರಾಗಿ ಕೆ.ಎನ್.ಫಣೀಂದ್ರ ನೇಮಕ

Prasthutha|

ಬೆಂಗಳೂರು: ಕರ್ನಾಟಕ ಲೋಕಾಯುಕ್ತದ ಎರಡನೇ ಉಪ ಲೋಕಾಯುಕ್ತ ಹುದ್ದೆಗೆ ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ನೇಮಕಗೊಂಡಿದ್ದಾರೆ. ರಾಜ್ಯ ಸರ್ಕಾರದ ಶಿಫಾರಸ್ಸಿಗೆ ಸಮ್ಮತಿಸಿದ ರಾಜ್ಯಪಾಲರು ಸೋಮವಾರ ನೇಮಕಾತಿ ಆದೇಶಕ್ಕೆ ಸಹಿ ಹಾಕಿದ್ದು, ಮಂಗಳವಾರ ಈ ಕುರಿತಾದ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಸುಮಾರು ಒಂದು ವರ್ಷದಿಂದ ಈ ಹುದ್ದೆ ಖಾಲಿ ಇತ್ತು.

- Advertisement -


ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಅವರ ಜೊತೆ ಸಮಾಲೋಚನೆ ನಡೆಸಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ್ಯಾ. ಕೆ ಎನ್ ಫಣೀಂದ್ರ ಅವರ ಹೆಸರನ್ನು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದರು.


ಕರ್ನಾಟಕ ಲೋಕಾಯುಕ್ತ ಕಾಯಿದೆ 1984ರ ಸೆಕ್ಷನ್ 3(1) ರ ಅಡಿ ಅಧಿಕಾರ ಬಳಿಸಿ ರಾಜ್ಯಪಾಲರು ನೇಮಕಾತಿ ಆದೇಶಕ್ಕೆ ಸಹಿ ಹಾಕಿದ್ದಾರೆ.




Join Whatsapp