ದೆಹಲಿ: ತೈಲ ಬೆಲೆಯೇರಿಕೆ ವಿರೋಧಿಸಿ ಯೂತ್ ಕಾಂಗ್ರೆಸ್’ನಿಂದ ಪ್ರತಿಭಟನೆ; ಕಾರ್ಯಕರ್ತರ ಬಂಧನ

Prasthutha|

ನವದೆಹಲಿ: ಇಂಧನ, ಗ್ಯಾಸ್ ಬೆಲೆಯೇರಿಕೆಯಲ್ಲಿ ತೊಡಗಿರುವ ಕೇಂದ್ರ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ದೆಹಲಿಯಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತು.

- Advertisement -

ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಸರ್ಕಾರ ಈ ಕೂಡಲೇ ಬೆಲೆಯೇರಿಕೆಯನ್ನು ಹಿಂಪಡೆಯಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

- Advertisement -

ಕೇಂದ್ರ ಸರ್ಕಾರ ಬೆಲೆಯೇರಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದ್ದಾರೆ.




Join Whatsapp