ದೆಹಲಿ: ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿ, ಎಲ್ಲರೂ ಉಚಿತವಾಗಿ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸಲಹೆ ನೀಡಿದ್ದಾರೆ.
“ಬಿಜೆಪಿಗರು ದೆಹಲಿಯಲ್ಲಿ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ಕೇಳುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ಅಪ್ಲೋಡ್ ಮಾಡಿ. ಇದರಿಂದ ಸಿನಿಮಾವನ್ನು ಉಚಿತವಾಗಿ ನೋಡಲು ಸಾಧ್ಯವಾಗುತ್ತದೆ. ಎಲ್ಲರೂ ಚಿತ್ರವನ್ನು ವೀಕ್ಷಿಸಬಹುದು” ಎಂದು ಅರವಿಂದ ಕೇಜ್ರಿವಾಲ್ ಹೇಳಿದರು.
ಗುರುವಾರ ವಿಧಾನಸಭೆಯಲ್ಲಿ ಮಾತನಾಡಿದ ಕೇಜ್ರಿವಾಲ್, ”ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನು 8 ವರ್ಷಗಳ ಕಾಲ ಆಳಿದರೂ ಆರೋಪಿಸುವುದನ್ನು ನಿಲ್ಲಿಸಿಲ್ಲ. ರಾಜಕೀಯ ಲಾಭಕ್ಕಾಗಿ ಒಂದು ಸಿನಿಮಾದ ಸಹಾಯವನ್ನು ಪಡೆಯುತ್ತಿದ್ದಾರೆ” ಎಂದು ಟೀಕಿಸಿದರು.
ಈ ಮೂಲಕ ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ ಕಥೆ ಆಧರಿತ ಸಿನೆಮಾವನ್ನು ಬಿಜೆಪಿ ಪಕ್ಷವು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವ ಬಗ್ಗೆಯೂ ಕೇಜ್ರಿವಾಲ್ ಕಿಡಿ ಕಾರಿದ್ದಾರೆ.