ಚೀನಾ ವಿದೇಶಾಂಗ ಸಚಿವ ವಾಂಗ್‌ ಇ ಭಾರತಕ್ಕೆ; 2020 ರ ಹೋರಾಟದ ಬಳಿಕ ಮೊದಲ ಭೇಟಿ

Prasthutha|

ಹೊಸದಿಲ್ಲಿ: ಚೀನಾದ ವಿದೇಶಾಂಗ ಸಚಿವ ವಾಂಗ್‌ ಇ ಅವರು ಗುರುವಾರ ತಡರಾತ್ರಿ  ಹೊಸದಿಲ್ಲಿಗೆ ಆಗಮಿಸಿದ್ದು, ಶುಕ್ರವಾರ ಅವರು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸೇರಿದಂತೆ ಪ್ರಮುಖರನ್ನು ಭೇಟಿ ಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

2020ರ ಜೂನ್‌ನಲ್ಲಿ ಪೂರ್ವ ಲಡಾಖ್‌ನ ಗಾಲ್ವನ್‌ನಲ್ಲಿ ಎರಡೂ ದೇಶಗಳ ನಡುವೆ ಹೋರಾಟ ನಡೆದ ಬಳಿಕ ಇದೇ ಮೊದಲ ಬಾರಿಗೆ ಚೀನಾ ಸರಕಾರದ ಉನ್ನತ ಮಟ್ಟದ ಸಚಿವರು ಭಾರತ ಪ್ರವಾಸ ಕೈಗೊಂಡಿದ್ದಾರೆ. ಈ ಭೇಟಿ ಎರಡೂ ದೇಶಗಳ ನಡುವಿನ ಬಿಗುವಿನ ವಾತಾವರಣ ತಣಿಸುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆದಿವೆ.

ಇಸ್ಲಾಮಾಬಾದ್‌ನಲ್ಲಿ ನಡೆದ ಇಸ್ಲಾಮಿಕ್‌ ರಾಷ್ಟ್ರಗಳ ಒಕ್ಕೂಟದ ಸಭೆಯಲ್ಲಿ ಕಾಶ್ಮೀರ ವಿಚಾರದ ಬಗ್ಗೆ ಚೀನ ಸಚಿವ ವಾಂಗ್‌ ಇ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್‌ ರಾಷ್ಟ್ರಗಳು ಹೊಂದಿರುವ ಅಭಿಪ್ರಾಯವನ್ನೇ ಚೀನಾ ಹೊಂದಿದೆ ಎಂದು ವಾಂಗ್‌ ಇ ಪ್ರತಿಕ್ರಿಯಿಸಿದ್ದಾರೆ.



Join Whatsapp