ಜಿಂದ್: ಹರ್ಯಾಣದಲ್ಲಿ 2024 ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವುದಾಗಿ ಹಿರಿಯ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಭರವಸೆ ನೀಡಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕ್ರೀಡಾ ಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಮತ್ತು ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಮರುಸ್ಥಾಪಿಸಲಾಗುವುದು,’’ ಎಂದು ಹೇಳಿದ್ದಾರೆ.
ಆಡಳಿತಾರೂಢ ಬಿಜೆಪಿ-ಜೆಜೆಪಿ ಇತ್ತೀಚೆಗೆ ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾ ಪಟುಗಳಿಗೆ ನೀಡಲಾಗಿದ್ದ ಶೇ.3ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿತ್ತು.