ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಆನೆ ಸಾವು !

Prasthutha|

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು 20 ವರ್ಷದ ಆನೆಯೊಂದು ಸಾವನ್ನಪ್ಪಿರುವ ಘಟನೆ ಕನಕಪುರ ರಸ್ತೆಯಲ್ಲಿ ನಡೆದಿದೆ.

- Advertisement -

ಬಸ್ ತೆರಳುತ್ತಿದ್ದ ಮಾರ್ಗದಲ್ಲೆ ಆನೆ ಏಕಾಏಕಿ ಓಡಿ ಬಂದಿದೆ. ಆ ಸಂದರ್ಭದಲ್ಲಿ ಬ್ರೇಕ್ ಹಾಕಿದರೂ ಬಸ್ ಆನೆಗೆ ಡಿಕ್ಕಿ ಹೊಡೆದಿದ್ದಾಗಿ ಚಾಲಕ ತನ್ನ ಹೇಳಿಕೆಯಲ್ಲಿ ತಿಳಿಸಿದ್ದಾನೆ.

ಬಸ್ ನಲ್ಲಿ 13 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.  ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದೆ.



Join Whatsapp