ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಬಿಜೆಪಿ-ಟಿಎಂಸಿ ಶಾಸಕರ ಹೊಡೆದಾಟ

Prasthutha|

ಕೊಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ತಳ್ಳಾಟ, ಹೊಡೆದಾಟ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

- Advertisement -

ಪಶ್ಚಿಮ ಬಂಗಾಳದಲ್ಲಿ ನಡೆದ ರಾಮಪುರಹತ್ ಹತ್ಯಾಕಾಂಡದ ಬಗ್ಗೆ ಚರ್ಚೆಗೆ ಸುವೇಂದು ಅಧಿಕಾರಿ ಪಟ್ಟು ಹಿಡಿದಿದ್ದರು. ಆಗ ಬಿಜೆಪಿ ಮುಖ್ಯ ಸಚೇತಕ ಮನೋಜ್ ತಿಗ್ಗಾ ಮೇಲೆ ಹಲ್ಲೆ ನಡೆಸಲಾಗಿದೆ. ಈ ಗಲಾಟೆಯಲ್ಲಿ ಟಿಎಂಸಿ ಶಾಸಕ ಅಸೀತ್ ಮಜುಂದಾರ್ ಅವರ ಮೂಗಿಗೆ ಗಂಭೀರ ​ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿರೋಧ ಪಕ್ಷ ನಾಯಕ, ಬಿಜೆಪಿ ಮುಖಂಡ ಸುವೇಂದು ಅಧಿಕಾರಿಗೆ ಮೂಗಿದೆ ಬಲವಾಗಿ ಗುದ್ದಿದ್ದಾರೆ ಎಂದು ಅಸೀತ್ ಆರೋಪಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಸುವೇಂದು ಅಧಿಕಾರಿ ಸೇರಿದಂತೆ ಐವರು ಬಿಜೆಪಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ.

ಟಿಎಂಸಿ – ಬಿಜೆಪಿ ಶಾಸಕರು ಸದನದೊಳಗೆ ಹೊಡೆದಾಡುತ್ತಿರುವ ವೀಡಿಯೋವನ್ನು ಬಿಜೆಪಿಯ ಐಟಿ ಸೆಲ್ ಹಂಚಿಕೊಂಡಿದ್ದು, ಟಿಎಂಸಿ ಶಾಸಕರು ಬಿಜೆಪಿಯವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪವನ್ನು ನಿರಾಕರಿಸಿರುವ ಟಿಎಂಸಿ ನಾಯಕ, ಸಚಿವ ಫಿರ್ಹಾದ್ ಹಕೀಮ್ ಅವರು ಬಿಜೆಪಿಗರು ನಮ್ಮ ಶಾಸಕರ ಮೇಲೆ ವಿನಾ ಕಾರಣ ಹಲ್ಲೆ ನಡೆಸಿದ್ದು, ಈ ನಡೆಯನ್ನು ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

- Advertisement -

ಪಶ್ಚಿಮ ಬಂಗಾಳದ ವಿಧಾನಸಭೆಯಲ್ಲಿ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ಶಾಸಕರು ಹೊಡೆದಾಡಿಕೊಂಡಿದ್ದಾರೆ. ಈ ವೇಳೆ ಸದನದಲ್ಲಿ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು, ಶಾಸಕರು ಪರಸ್ಪರರನ್ನು ಒದ್ದು, ಗುದ್ದಾಡಿಕೊಂಡ ಘಟನೆಯೂ ನಡೆಯಿತು.



Join Whatsapp