ಮೈಸೂರು: SSLC ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಕುಸಿದ ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಟಿ ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದೆ.
10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅನುಶ್ರೀ ಮೃತಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನು ಟಿ ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಸಿಬ್ಬಂದಿ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಅನುಶ್ರೀ ಸಾವನ್ನಪ್ಪಿದ್ದಾಳೆ.
ಈ ಬಗ್ಗೆ ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.