ಕಾಶ್ಮೀರ ಫೈಲ್ಸ್ ಚಿತ್ರಕ್ಕೆ ಟಿಕೆಟ್ ನೀಡಿದಂತೆ ಇಂಧನಕ್ಕೂ ಕೂಪನ್ ನೀಡಿ: ಸಚಿವ ಪ್ರತಾಪ್ ಖಚರಿಯಾವಾಸ್ ವ್ಯಂಗ್ಯ

Prasthutha|

ಜೈಪುರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಳೆದ ಒಂದು ವಾರದಿಂದ ಲೀಟರ್’ಗೆ  ಸುಮಾರು 5 ರೂಪಾಯಿಗಳಷ್ಟು ಏರಿಕೆಯಾಗಿರುವ ಹಿನ್ನಲೆಯಲ್ಲಿ ಕಾಶ್ಮೀರ ಫೈಲ್ಸ್ ಚಿತ್ರಕ್ಕೆ ಟಿಕೆಟ್ ನೀಡಿದಂತೆ ಕೇಂದ್ರದ ಆಡಳಿತಾರೂಢ ಬಿಜೆಪಿಯು ಇಂಧನಕ್ಕಾಗಿ ಕೂಪನ್ ಗಳನ್ನು ವಿತರಿಸಬೇಕು ಎಂದು ರಾಜಸ್ಥಾನದ ಸಚಿವ ಪ್ರತಾಪ್ ಖಚರಿಯಾವಾಸ್  ಹೇಳಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚುನಾವಣೆಯ ನಂತರ, ಬಿಜೆಪಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ. ಬಿಜೆಪಿಯ ಮುಖ್ಯಮಂತ್ರಿ, ಮಂತ್ರಿಗಳು ‘ದಿ ಕಾಶ್ಮೀರ ಫೈಲ್ಸ್’ ಚಿತ್ರದ ಟಿಕೆಟ್ ಗಳನ್ನು ವಿತರಿಸಿದಂತೆಯೇ ಪೆಟ್ರೋಲ್, ಡೀಸೆಲ್ ಗೆ ಕೂಪನ್ ಗಳನ್ನು ವಿತರಿಸಬೇಕು,” ಎಂದು ತಿಳಿಸಿದರು.



Join Whatsapp