ಶಿರವಸ್ತ್ರ ಧರಿಸಿ ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದಕ್ಕಾಗಿ 8 ಶಿಕ್ಷಕರ ಅಮಾನತು

Prasthutha|

ಗದಗ: ಇಲ್ಲಿನ ಸಿ.ಎಸ್.ಪಾಟೀಲ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಕನ್ನಡ ಪರೀಕ್ಷೆ ವೇಳೆ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ಸಹ ಶಿಕ್ಷಕರನ್ನು ಅಮಾನತ್ತುಗೊಳಿಸಿ ಡಿಡಿಪಿಐ ಜಿ.ಎಂ.ಬಸವಲಿಂಗಪ್ಪ ಆದೇಶ ಹೊರಡಿಸಿದ್ದಾರೆ.

- Advertisement -

ಸಿ.ಎಸ್.ಪಾಟೀಲ ಬಾಲಕರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರ ಸಂಖ್ಯೆ 08 ರಲ್ಲಿ ಮೇಲ್ವಿಚಾರಕರಾಗಿದ್ದ ಎಸ್.ಎಂ.ಕೃಷ್ಣಾ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಂ.12ರ ಸಹ ಶಿಕ್ಷಕ ಎಸ್.ಯು.ಹೊಕ್ಕಳದ, ಎಸ್.ಎಂ.ಪತ್ತಾರ, ಎಸ್.ಜಿ.ಗೋಡಕೆ, ಎಸ್.ಎಸ್.ಗುಜಮಾಗಡಿ, ವಿ.ಎನ್.ಕಿವುಡರ ಅವರನ್ನು ಅಮಾನತುಗೊಳಿಸಲಾಗಿದೆ.

ಕಲಬುರಗಿಯಲ್ಲೂ ಓರ್ವ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

ಅಲ್ಲದೆ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ತಿಳಿದುಬಂದಿದೆ.




Join Whatsapp