ಲಖಿಂಪುರ ಖೇರಿ ಹಿಂಸಾಚಾರ: ಆಶಿಶ್ ಮಿಶ್ರಾ ಜಾಮೀನು ರದ್ದುಗೊಳಿಸಲು ಮೇಲ್ವಿಚಾರಣಾ ಸಮಿತಿ ಶಿಫಾರಸು

Prasthutha|

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ರದ್ದುಗೊಳಿಸುವಂತೆ ಮೇಲ್ವಿಚಾರಣಾ ಸಮಿತಿ, ಸುಪ್ರೀಮ್ ಕೋರ್ಟ್ ಗೆ ಶಿಫಾರಸು ಮಾಡಿದೆ.

- Advertisement -

ಲಖಿಂಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸುಪ್ರೀಮ್ ಕೋರ್ಟ್ ವಿಶೇಷ ಸಮಿತಿಯೊಂದನ್ನು ರಚಿಸಿತ್ತು.

ಈ ಮಧ್ಯೆ ಇತ್ತೀಚಿನ ಬೆಳವಣಿಗೆಯೊಂದರಲ್ಲಿ ಲಖಿಂಪುರ ಖೇರಿ ಘಟನೆಯ ಸಾಕ್ಷಿ ಮತ್ತು ಸಂತ್ರಸ್ತರ ಕುಟುಂಬಗಳನ್ನು ಸಂರಕ್ಷಿಸಲು ರಾಜ್ಯ ಎಲ್ಲಾ ಪ್ರಯತ್ನಗಳನ್ನು ನಿರ್ವಹಿಸಿದೆ ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಮ್ ಕೋರ್ಟ್ ಗೆ ತಿಳಿಸಿತ್ತು.

- Advertisement -

ಮಾತ್ರವಲ್ಲ ಅವರ ಭದ್ರತಾ ಪರಿಸ್ಥಿತಿಯ ಕುರಿತು ಅವಲೋಕಿಸಲು ಪೊಲೀಸರು ಎಲ್ಲಾ ಸಾಕ್ಷಿಗಳ ಸಂಪರ್ಕದಲ್ಲಿದ್ದಾರೆ ಎಂದು ಆದಿತ್ಯನಾಥ್ ಸರ್ಕಾರ ತಿಳಿಸಿತ್ತು.

ಸದ್ಯ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರಯಿಕ್ರಿಯಿಸಿ ಉತ್ತರ ಪ್ರದೇಶ ಸರ್ಕಾರ ಅಫಿದವಿತ್ ಸಲ್ಲಿಸಿದೆ.

ಈ ಹಿಂದೆ, ಆಶಿಶ್ ಮಿಶ್ರಾಗೆ ಜಾಮೀನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಸರ್ಕಾರ ಮತ್ತು ಇತರರಿಗೆ ನೋಟಿಸ್ ನೀಡಿತ್ತು.




Join Whatsapp