ಮಂಗಳೂರು: ಕುಖ್ಯಾತ ಕ್ರಿಮಿನಲ್ಗಳಾಗಿರುವ ಪಿಂಕಿ ನವಾಜ್ ಮತ್ತು ಆಕಾಶ ಭವನ ಶರಣ್ ಮೇಲೆ ಮಂಗಳೂರು ನಗರ ಪೊಲೀಸರು ಹಾಕಿರುವ ಗೂಂಡಾ ಕಾಯ್ದೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದೆ.
ಹತ್ಯೆ, ಕೊಲೆ ಯತ್ನ, ದರೋಡೆ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಪಿಂಕಿ ನವಾಜ್ ಮತ್ತು ಆಕಾಶಭವನ ಶರಣ್‌ನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದರು. ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಈ ಇಬ್ಬರ ಮೇಲೆ ಗೂಂಡಾ ಕಾಯ್ದೆ ಹಾಕುವ ಪ್ರಸ್ತಾವನೆಯನ್ನು ರಾಜ್ಯ ಗೃಹ ಇಲಾಖೆಗೆ ಸಲ್ಲಿಸಲಾಗಿತ್ತು.
ಇದೀಗ ರಾಜ್ಯ ಹೈಕೋರ್ಟ್ ಒಪ್ಪಿಗೆ ನೀಡಿದ್ದು, ಇಬ್ಬರನ್ನು ಒಂದು ವರ್ಷದವರೆಗೆ ನ್ಯಾಯಾಂಗ ಬಂಧನದಲ್ಲಿರಿಸುವಂತೆ ರಾಜ್ಯ ಗೃಹ ಇಲಾಖೆ ಆದೇಶಿಸಿದೆ.