ಕೊನೆಗೂ ರಾಜೀನಾಮೆ ನೀಡಿದ ಸಿ.ಎಂ ಇಬ್ರಾಹಿಂ: ರಾಜೀನಾಮೆ ಅಂಗೀಕರಿಸಿದ ಸಭಾಪತಿ

Prasthutha|

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವ ಸಿ.ಎಂ. ಇಬ್ರಾಹಿಂ ಅವರು ಗುರುವಾರ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಅಂಗೀಕರಿಸಿದ್ದಾರೆ.

- Advertisement -

ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಸಿ.ಎಂ ಇಬ್ರಾಹಿಂ ಹೇಳಿದ್ದರು. ಸಿದ್ದರಾಮಯ್ಯನವರಿಗೂ ರಾಜೀನಾಮೆ ಪತ್ರ ಕಳುಹಿಸಿದ್ದೇನೆ ಎಂದಿದ್ದರು.

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹಲವು ದಿನಗಳ ಹಿಂದೆಯೇ ಹೇಳಿದ್ದ ಸಿ.ಎಂ. ಇಬ್ರಾಹಿಂ ಬಹಿರಂಗ ವಾಗ್ದಾಳಿ ನಡೆಸುತ್ತಿದ್ದರು.ಆದರೂ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಹಲವು ಪ್ರಯತ್ನ ನಡೆಸಿದ್ದರು. ಸಿ.ಎಂ ಇಬ್ರಾಹಿಂ ಅವರು ಈಗಾಗಲೇ ಜೆಡಿಎಸ್ ಸೇರುವ ಸಿದ್ಧತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp