ಉಡುಪಿ: ಮಸೀದಿಗೆ ಕಲ್ಲೆಸೆದು ಹಾನಿಗೈದ ಕಿಡಿಗೇಡಿಗೆ 3 ವರ್ಷ ಕಾರಾಗೃಹ ಶಿಕ್ಷೆ

Prasthutha|

ಉಡುಪಿ: ಇಲ್ಲಿನ ಆದಿ ಉಡುಪಿಯ ಮಸ್ಜಿದ್ ಇ ನೂರುಲ್ಲಾ ಮಸೀದಿಗೆ ಅಕ್ರಮವಾಗಿ ಪ್ರವೇಶ ಮಾಡಿ ಕಲ್ಲೆಸೆದು ಕಿಟಿಕಿ ಗಾಜು ಪುಡಿಗೈದಿದ್ದಲ್ಲದೇ, ಜಿಲ್ಲೆಯ ಶಾಂತಿ ಭಂಗಕ್ಕೆ ಕಾರಣವಾಗಿದ್ದಾತನಿಗೆ 3 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ಉಡುಪಿಯ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

- Advertisement -

2017 ಜನವರಿ 29 ರಂದು ಉಡುಪಿ ಪುತ್ತೂರಿನ ಕೊಡಂಕೂರು ಗ್ರಾಮದ ನಿವಾಸಿ ಅಂಕಿತ್ ಕುಂಪಲ ಎಂಬಾತನು, ಮಸೀದಿಗೆ ಅಕ್ರಮ ಪ್ರವೇಶ ಮಾಡಿ, ಮಸೀದಿಯ ಕಿಟಕಿಯ ಗಾಜನ್ನು ಪುಡಿ ಮಾಡಿ ನಷ್ಟ ಉಂಟುಮಾಡಿದ್ದಲ್ಲದೇ, ಸಾರ್ವಜನಿಕ ಶಾಂತಿಗೆ ಭಂಗವನ್ನುಂಟು ಮಾಡಿದ ಆರೋಪದಡಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.  

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ರವರು ಆರೋಪಿ ಅಂಕಿತ್ ಕುಂಪಲ ಗೆ 3 ವರ್ಷದ ಕಾರಾಗೃಹ ವಾಸ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ.

- Advertisement -

ಸರಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿರುತ್ತಾರೆ.




Join Whatsapp