ಬೆಂಗಳೂರು ರಸ್ತೆ ಸರಿಯಿಲ್ಲ ಎಂದ ಖಾತಾಬುಕ್ ಸಿಇಒಗೆ ಬ್ಯಾಗ್ ಪ್ಯಾಕ್ ಮಾಡಿ ಹೈದರಾಬಾದಿಗೆ ಬನ್ನಿ ಎಂದ ತೆಲಂಗಾಣ ಸಚಿವ !

Prasthutha|

ಬೆಂಗಳೂರು: ಬೆಂಗಳೂರಿನ ಕಳಪೆ ರಸ್ತೆಗಳ ಕುರಿತು ಟ್ವೀಟ್ ಮಾಡಿದ್ದ ‘ಖಾತಾಬುಕ್’ ಕಂಪನಿಯ ಸಿಇಒ ರವೀಶ್ ನರೇಶ್ ಗೆ ತೆಲಂಗಾಣ ಸಚಿವ ಕೆ.ಟಿ.ರಾಮಾರಾವ್ ಆಫರ್ ಒಂದನ್ನು ನೀಡಿದ್ದಾರೆ. ನಿಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಂಡು, ಹೈದರಾಬಾದಿಗೆ ಬಂದು ಬಿಡಿ’ ಎಂದು ಕೋರಿಕೊಂಡಿದ್ದಾರೆ.

- Advertisement -

ಬೆಂಗಳೂರಿನ ರಸ್ತೆಗಳ ಬಗ್ಗೆ ಟ್ವೀಟ್ ಮಾಡಿದ್ದ ರವೀಶ್, ಕೋಟ್ಯಂತರ ಡಾಲರ್ ಮೊತ್ತದ ತೆರಿಗೆ ಪಾವತಿಸಿದರೂ ಈ ಪ್ರದೇಶದಲ್ಲಿ ರಸ್ತೆಗಳು ಸರಿಯಿಲ್ಲ. ಪವರ್ ಕಟ್ ಪ್ರತಿದಿನ ಆಗುತ್ತಿದೆ. ನೀರು ಸರಿಯಾಗಿ ಬರುತ್ತಿಲ್ಲ, ಫುಟ್ಪಾತ್ ಇಲ್ಲ. ವಿಮಾನ ನಿಲ್ದಾಣಕ್ಕೆ ಹೋಗಬೇಕೆಂದರೆ ಮೂರು ಗಂಟೆ ಬೇಕಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರವೀಶ್ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ತೆಲಂಗಾಣದ ಕೈಗಾರಿಕೆ, ವಾಣಿಜ್ಯ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ಕೆ.ಟಿ.ರಾಮಾರಾವ್, ‘ನಿಮ್ಮ ಬ್ಯಾಗ್ ಪ್ಯಾಕ್ ಮಾಡಿಕೊಂಡು ಹೈದರಾಬಾದ್ಗೆ ಬನ್ನಿ ಎಂದಿದ್ದಾರೆ. ನಮ್ಮಲ್ಲಿ ಉತ್ತಮ ಮೂಲಸೌಕರ್ಯಗಳಿದ್ದು, ಇಲ್ಲಿನ ವಿಮಾನ ನಿಲ್ದಾಣವು ಅತ್ಯುತ್ತಮವಾಗಿದೆ. ನಮ್ಮ ನಗರದ ಹೊರವಲಯದಲ್ಲಿ ತಣ್ಣನೆ ವಾತಾವರಣವಿದೆ. ನಮ್ಮ ಸರ್ಕಾರವು ಆವಿಷ್ಕಾರ, ಮೂಲಸೌಕರ್ಯ ಮತ್ತು ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಗೆ ಬದ್ಧವಾಗಿದೆ’ ಎಂದು ಹೇಳಿದ್ದಾರೆ.

- Advertisement -



Join Whatsapp