ಘಾಝಿಯಾಬಾದ್: ನವರಾತ್ರಿ ಸಂದರ್ಭದಲ್ಲಿ ಮಾಂಸ ಮಾರಾಟವನ್ನು ನಿಷೇಧಿಸಿ ಘಾಝಿಯಾಬಾದ್ ನಗರ ನಿಗಮ ಆದೇಶ ಹೊರಡಿಸಿದ್ದು, ಏಪ್ರಿಲ್ 2 ರಿಂದ 10ರ ವರೆಗೆ ಈ ಪ್ರಕ್ರಿಯೆ ಜಾರಿಯಲ್ಲಿರುತ್ತದೆ ನಿಗಮ ಸ್ಪಷ್ಟಪಡಿಸಿದೆ.
ಹಿಂದೂಗಳೂ ಹಬ್ಬದ ಪ್ರಯುಕ್ತ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸಂಘಪರಿವಾರವು, ಉತ್ತರ ಪ್ರದೇಶ, ಹರ್ಯಾಣ, ಮಧ್ಯಪ್ರದೇಶ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರಚೋದನಕಾರಿಯಾಗಿ ಪ್ರಚಾರ ಮಾಡುತ್ತಿವೆ.
ಈ ಕುರಿತು ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಧಿಕಾರಿಯೊಬ್ಬರು ಮಾಂಸದ ಅಂಗಡಿಯ ಕಾರ್ಮಿಕರಿಗೆ ಬೆದರಿಕೆ ಹಾಕುತ್ತಿರುವುದನ್ನು ವೀಡಿಯೋದಲ್ಲಿ ಸೆರೆಯಾಗಿದೆ.
ಈ ಮಧ್ಯೆ ನವರಾತ್ರಿ ಹಬ್ಬದ ಸಂದರ್ಭದಲ್ಲಿ ದೇವಸ್ಥಾನಗಳಲ್ಲಿ ಸ್ವಚ್ಛತೆ ಕಾಪಾಡುವಂತೆ ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಮೇಯರ್ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯ ಐದು ವಲಯಗಳಲ್ಲಿ ಆದೇಶ ಹೊರಡಿಸಲಾಗಿದೆ ಎಂದು ಹೇಳಲಾಗಿದೆ.
ಲೋಣಿ ಶಾಸಕ ನಂದ ಕಿಶೋರ್ ಗುರ್ಜರ್ ಅವರು ಈ ಹಿಂದೆ ಹಬ್ಬಗಳ ಸಂದರ್ಭದಲ್ಲಿ ಮಾಂಸದ ಅಂಗಡಿಗಳನ್ನು ಮುಚ್ಚವಂತೆ ಹಲವು ಬಾರಿ ಮನವಿ ಮಾಡಿದ್ದರು. ಮುಂದಿನ ದಿನಗಳಲ್ಲಿ ನಗರ ಮತ್ತು ಗ್ರಾಮೀನ ಪ್ರದೇಶಗಳಲ್ಲಿ ಅಂಗಡಿಗಳು ಮುಚ್ಚಲ್ಪಡುತ್ತದೆ ಎಂದು ಅಂದಾಜಿಸಲಾಗಿದೆ.