ಬೆಂಗಳೂರು: ಮುಂದಿನ ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆಗೆ ಬಿಜೆಪಿ ಸೇರುತ್ತೇನೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ, ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಚರ್ಚೆಗಳು ನಡೆದಿದ್ದು, ಬಹುತೇಕವಾಗಿ ಸೇರ್ಪಡೆ ಖಚಿತ ಎಂದಿದ್ದಾರೆ.
ಪ್ರಸ್ತುತ ಸಭಾಪತಿ ಸ್ಥಾನದಲ್ಲಿರುವುದರಿಂದ ಹೆಚ್ಚಾಗಿ ಹೇಳಲು ಸಾಧ್ಯವಿಲ್ಲ, ಆ ಬಳಿಕ ಅಧಿಕೃತ ಘೋಷಣೆ ಮಾಡುವುದಾಗಿ ಹೇಳಿದರು. ಈಗಾಗಲೇ ಬಿಜೆಪಿ ನಾಯಕರೊಂದಿಗೆ ಮಾತುಕತೆ ಆಗಿದೆ. ಎಲ್ಲ ನಾಯಕರಿಂದಲೂ ಸಹಮತ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ, ಸೇರಿದಂತೆ ಸಚಿವರೆಲ್ಲರೂ ಪಕ್ಷಕ್ಕೆ ಸೇರ್ಪಡೆಯಾಗುವ ಬಗ್ಗೆ ಸಹಮತ ಸೂಚಿಸಿದ್ದು, ಚುನಾವಣೆ ಘೋಷಣೆಯಾದ ಬಳಿಕ ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದರು.