ಕಡಬ: ಕಾರೊಂದು ಬೈಕ್ ನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಚಲಾಯಿಸುತ್ತಿದ್ದ ನಿವೃತ್ತ ಎಎಸ್ಐ ಓರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದ ಬಳಿ ಭಾನುವಾರದಂದು ಸಂಭವಿಸಿದೆ.
ಮೃತರನ್ನು ಕುಲ್ಕುಂದ ನಿವಾಸಿ ನಿವೃತ್ತ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಎ.ಪಿ.ಗೌಡ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕಾರು ಹಾಗೂ ಎ.ಪಿ. ಗೌಡ ಅವರ ಬೈಕ್ ನಡುವೆ ಢಿಕ್ಕಿ ಉಂಟಾಗಿ ಈ ದುರ್ಘಟನೆ ಸಂಭವಿಸಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.