ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

Prasthutha|

ಬೆಂಗಳೂರು: ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎ. 4, 5 ಮತ್ತು 6ರಂದು ಮಳೆ ಬರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

- Advertisement -

ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.



Join Whatsapp