ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಸೆಂಟ್ರಲ್ ಬ್ಯಾಂಕ್ ಗವರ್ನರ್ ರಾಜೀನಾಮೆ

Prasthutha|

ಶ್ರೀಲಂಕಾ: ಸರ್ಕಾರದ 26 ಸಚಿವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸೆಂಟ್ರಲ್ ಬ್ಯಾಂಕ್ ಗವರ್ನರ್ ಅಜಿತ್ ನಿವಾರ್ಡ್ ಕ್ಯಾಬ್ರಾಲ್ ರಾಜೀನಾಮೆ ಪತ್ರವನ್ನು ಅಧ್ಯಕ್ಷ ಗೋಟಬಯ ರಾಜಪಕ್ಸ ಅವರಿಗೆ ಸಲ್ಲಿಸಿರುವುದಾಗಿ ಟ್ವೀಟ್ ಮಾಡಿದ್ದಾರೆ.

- Advertisement -

ದೇಶದಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಬಿಕ್ಕಟ್ಟಿನ ಕಾರಣ ಸರ್ಕಾರದ ವಿರುದ್ಧ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಬೆನ್ನಲ್ಲೇ ಪ್ರಧಾನಮಂತ್ರಿ ಮಹಿಂದಾ ರಾಜಪಕ್ಸ ಹೊರತುಪಡಿಸಿ ಸಂಪುಟದ ಎಲ್ಲಾ 26 ಸಚಿವರು ಭಾನುವಾರ ರಾತ್ರಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.



Join Whatsapp