ನವದೆಹಲಿ: ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗುತ್ತಿರುವುದನ್ನು ಪ್ರಧಾನ ಮಂತ್ರಿಯ ಜನ್ ಧನ್ ಲೂಟಿ ಯೋಜನೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮೇ 2014ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿದ್ದ ತೈಲ ಬೆಲೆ ಹಾಗೂ ಇಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ತೈಲ ಬೆಲೆಯ ಬಗ್ಗೆ ಅಂಕಿ ಅಂಶ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ನೀತಿಯನ್ನು ಟೀಕಿಸಿದ್ದಾರೆ.