ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ: ಮುಖ್ಯಮಂತ್ರಿ ಬೊಮ್ಮಾಯಿ

Prasthutha|

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ತುಟ್ಟಿ ಭತ್ಯೆಯನ್ನು ಹೆಚ್ಚಿಸಿದೆ. ಇದೇ ಸಾಲಿನ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

- Advertisement -

ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. 1447 ಕೋಟಿ ರೂ. ವಾರ್ಷಿಕ ವೆಚ್ಚವನ್ನು ರಾಜ್ಯ ಸರಕಾರ ಭರಿಸಲಿದ್ದು, ಈ ಕುರಿತು ಶೀಘ್ರದಲ್ಲೇ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.



Join Whatsapp