ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ; ಜಾತಿ ಪ್ರಮಾಣ ಪತ್ರ ವಿರೋಧಿ ಹೋರಾಟ ಸಮಿತಿ

Prasthutha|

ಬೀದರ್: ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಬೇಡಜಂಗಮ ಪ್ರಮಾಣಪತ್ರವನ್ನು ಕಾನೂನು ಬಾಹಿರವಾಗಿ ಪಡೆದ ಶಾಸಕ ಎಂ.ಪಿ.ರೇಣುಕಾಚಾರ್ಯರ ಮಗಳು ಹಾಗೂ ಸೋದರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸುಳ್ಳು ಜಾತಿ ಪ್ರಮಾಣ ಪತ್ರ ವಿರೋಧಿ ಹೋರಾಟ ಸಮಿತಿ ಬೀದರ್ ಜಿಲ್ಲಾ ಘಟಕ ಒತ್ತಾಯಿಸಿದೆ.

- Advertisement -

ಶಾಸಕ ಎಂ.ಪಿ.ರೇಣುಕಾಚಾರ್ಯರ ಮಗಳು ಎಂ.ಆರ್. ಚೇತನ ಹಾಗೂ ಅವರ ಸೋದರ ಎಂ.ಪಿ. ದಾರಕೇಶ್ವರಯ್ಯ ಅವರು ಲಿಂಗಾಯತ ಜಾತಿಗೆ ಸೇರಿದವರಾಗಿದ್ದರೂ ಪರಿಶಿಷ್ಟ ಜಾತಿಯ ಬೇಡ ಜಂಗಮ ಜಾತಿ ಪ್ರಮಾಣ ಪತ್ರ ಪಡೆದು ಪರಿಶಿಷ್ಟ ಸಮುದಾಯಕ್ಕೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದೆ.

ಸರ್ಕಾರದ ಸೌಲಭ್ಯಗಳನ್ನು ಕಬಳಿಸಲು ಹಾಗೂ ರಾಜಕೀಯ ಲಾಭ ಪಡೆಯಲು ಸುಳ್ಳು ಜಾತಿ ಪ್ರಮಾಣಪತ್ರ ಪಡೆದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

- Advertisement -

ಹಂದಿ ಮಾಂಸ ಸೇವನೆ ಮಾಡುವ, ಗೊಂಬೆ ವೇಷ, ಗಿಳಿ ಶಾಸ್ತ್ರ ಹೇಳುವ, ವಾದ್ಯ ಬಾರಿಸಿ ಭಿಕ್ಷೆ ಬೇಡಿ ಬದುಕು ಸಾಗಿಸುವ, ಅಕ್ಷರ ವಂಚಿತ, ಕಾನೂನು ಅರಿವಿಲ್ಲದ ಅಲೆಮಾರಿ ಸಮುದಾಯಗಳಾದ ಬೇಡಜಂಗಮ, ಮಾಲಜಂಗಮ, ಭೋವಿ ಜನಾಂಗದವರು ಬಳ್ಳಾರಿ, ರಾಯಚೂರು, ಕಲಬುರಗಿ, ಕೊಪ್ಪಳ, ದಾವಣಗೆರೆಯಲ್ಲಿ ನೆಲೆಸಿದ್ದಾರೆ. ಆದರೆ, ವೀರಶೈವ ಲಿಂಗಾಯತ ಜಂಗಮರಿಗೂ ಈ ಸಮುದಾಯಕ್ಕೂ ಯಾವ ಸಂಬಂಧವೂ ಇಲ್ಲ.ಆದರೆ ಈ ಸಮುದಾಯದ ಹೆಸರಿನಲ್ಲಿ ಮೇಲ್ವರ್ಗದವರು ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯುತ್ತಿರುವುದು ಮತ್ತು ಅಧಿಕಾರಿಗಳು ನೀಡುತ್ತಿರುವುದು ಖಂಡನೀಯ ಎಂದು ಹೇಳಿದೆ.



Join Whatsapp