ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ; ಸಂಘಪರಿವಾರದಿಂದ ಭಿನ್ನಮತೀಯ ಜೋಡಿಗೆ ಹಲ್ಲೆ

Prasthutha|

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಗುಂಡ್ಯದಲ್ಲಿ ಅನೈತಿಕ ಪೊಲೀಸ್‌ಗಿರಿಯ ಘಟನೆ ನಡೆದಿದ್ದು, ಸಂಘಪರಿವಾರದ ಕಾರ್ಯಕರ್ತರು ಭಿನ್ನಮತೀಯ ಜೋಡಿಗೆ ಹಲ್ಲೆ ನಡೆಸಿದ್ದಾರೆ.

- Advertisement -

ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಿನ್ನಮತೀಯ ಜೋಡಿಯೊಂದನ್ನು ಪತ್ತೆಹಚ್ಚಿದ ಸಂಘಪರಿವಾರದ ಕಾರ್ಯಕರ್ತರು ಇಬ್ಬರಿಗೂ ಹಲ್ಲೆ ನಡೆಸಿದ ಬಳಿಕ ಪೊಲೀಸರಿಗೊಪ್ಪಿಸಲಾಗಿದೆ ಎಂದು ಹೇಳಲಾಗಿದೆ.

ವೇಣೂರು ಮೂಲದ ಯುವತಿ, ಪುತ್ತೂರಿನ ಆಟೋ ಚಾಲಕನಾಗಿರುವ ಯುವಕನೊಂದಿಗೆ ಗುಂಡ್ಯಕ್ಕೆ ತೆರಳುತ್ತಿದ್ದ ವೇಳೆ ಸಂಘಪರಿವಾರದ ಕಾರ್ಯಕರ್ತರು ಜೋಡಿಯನ್ನು ತಡೆದು ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಭಿನ್ನಮತೀಯ ಜೋಡಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.



Join Whatsapp