ಗೋವಾವನ್ನು ಭಾರತದ ಪ್ರವಾಸಿ ರಾಜಧಾನಿಯನ್ನಾಗಿ ಮಾಡಲು ಪ್ರಯತ್ನ: ಸಾವಂತ್

Prasthutha|

- Advertisement -

ಪಣಜಿ: ಗೋವಾ ರಾಜ್ಯವನ್ನು ಭಾರತದ ಪ್ರವಾಸಿ ರಾಜಧಾನಿಯನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ಪಣಜಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತದ ಪ್ರವಾಸಿ ರಾಜಧಾನಿಯಾಗುವ ಎಲ್ಲ ಗುಣಲಕ್ಷಣಗಳು ಗೋವಾದಲ್ಲಿವೆ. ಈ ನಿಟ್ಟಿನಲ್ಲಿ ಸರ್ಕಾರ ಹೆಚ್ಚಿನ ಪ್ರಯತ್ನ ನಡೆಸಲಿದೆ. ಗೋವಾದಲ್ಲಿ ಪ್ರವಾಸಿ ಕ್ಷೇತ್ರವು ಭಾರಿ ದೊಡ್ಡದಿದೆ. ಇಲ್ಲಿ ಪ್ರವಾಸೋದ್ಯಮ ಸಂಬಂಧಿತ ವಿವಿಧ ಉತ್ಸವಗಳನ್ನು ನಡೆಸಲಾಗುತ್ತದೆ. ಗೋವಾದಲ್ಲಿ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಹಲವು ಮೂಲಭೂತ ಸೌಲಭ್ಯಗಳಿದ್ದು, ಇನ್ನೂ ಹೆಚ್ಚಿನ ಸೌಲಭ್ಯ ಕಲ್ಪಿಸಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.



Join Whatsapp