ಪ್ರಸಿದ್ಧ ಸಸ್ಯ ವಿಜ್ಞಾನಿ ಡಾ.ಕೆ.ಗೋಪಾಲಕೃಷ್ಣ ಭಟ್ ನಿಧನ

Prasthutha|

ಉಡುಪಿ: ಪ್ರಸಿದ್ಧ ಸಸ್ಯ ವಿಜ್ಞಾನಿ ಹಾಗೂ ಪೂರ್ಣಪ್ರಜ್ಞ ಕಾಲೇಜು ನಿವೃತ್ತ ಪ್ರಾಧ್ಯಾಪಕ ಡಾ.ಕೆ.ಗೋಪಾಲಕೃಷ್ಣ ಭಟ್(75) ಚಿಟ್ಪಾಡಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು.

- Advertisement -

ಮೂಲತಃ ಕಾಸರಗೋಡು ನೀರ್ಚಾಲು ಕಾಕುಂಜೆಯವರಾದ ಇವರು ಜೀವನದ ಹೆಚ್ಚಿನ ಅವಧಿಯನ್ನು ಉಡುಪಿಯಲ್ಲೇ ಕಳೆದಿದ್ದಾರೆ.

33 ವರ್ಷಗಳ ಕಾಲ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಇವರು ಸಸ್ಯ ವರ್ಗೀಕರಣ ಶಾಸ್ತ್ರದಲ್ಲಿ ಅಪಾರ ಅಧ್ಯಯನ ನಡೆಸಿ  ‘ಫ್ಲೋರಾ ಆಫ್ ಉಡುಪಿ, ಫ್ಲೋರಾ ಆಫ್ ದಕ್ಷಿಣ ಕನ್ನಡ’ ಎಂಬ ಬೃಹತ್ ಸಸ್ಯಶಾಸ್ತ್ರೀಯ ನಿಘಂಟು ಹಾಗೂ ಸಂಶೋಧನಾ ಗ್ರಂಥಗಳನ್ನು ರಚಿಸಿದ್ದಾರೆ.

- Advertisement -

ಉಭಯ ಜಿಲ್ಲೆಗಳಲ್ಲಿರುವ ಸಮಗ್ರ ಸಸ್ಯಪ್ರಬೇಧಗಳ ಮಾಹಿತಿಯನ್ನು ಜಗತ್ತಿಗೆ ಪರಿಚಯಿಸಿರುವ  ಡಾ.ಕೆ.ಗೋಪಾಲಕೃಷ್ಣ ಭಟ್ ಅವರು ಮಣಿಪಾಲದ ಬಳಿ ಪತ್ತೆ ಹಚ್ಚಿದ ಸಸ್ಯಪ್ರಭೇದವೊಂದಕ್ಕೆ ಲಂಡನ್‌ನ ಪ್ರತಿಷ್ಠಿತ ಬಯೋಲಜಿಕಲ್ ಸೊಸೈಟಿಯು ‘ಪ್ಯಾರಾಕೈಟ್ಲಿಯ ಭಟ್ಟಿಯೈ’ ಎಂಬ ಹೆಸರನ್ನಿಟ್ಟು ಗೌರವ ಸೂಚಿಸಿದೆ.

ಡಾ.ಕೆ.ಗೋಪಾಲಕೃಷ್ಣ ಭಟ್ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳನ್ನು ಪಡೆದುಕೊಂಡಿದ್ದಾರೆ.



Join Whatsapp