ಬೆಂಗಳೂರು: ಏಪ್ರಿಲ್ 22ರಿಂದ ಪ್ರಾರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ರಾಜ್ಯ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಸರಕಾರದ ಆದೇಶವನ್ನು ಪಾಲಿಸಬೇಕು, ಶೀಘ್ರದಲ್ಲೇ ಸರಕಾರದಿಂದ ಈ ಕುರಿತು ಸುತ್ತೋಲೆ ಹೊರಿಡಿಸಲಾಗುವುದು ಎಂದಿದ್ದಾರೆ.
ರಾಜ್ಯದ ಜಿಲ್ಲಾ ಕಾಲೇಜುಗಳಲ್ಲಿ ಶೇ.90ರಷ್ಟು ಸಮವಸ್ತ್ರ ಇದೆ. ಶೇ.10ರಷ್ಟು ಕಾಲೇಜುಗಳಲ್ಲಿ ಮಾತ್ರ ಸಮವಸ್ತ್ರ ಇಲ್ಲ. ಯಾವುದೇ ಧರ್ಮಸೂಚಕ ವಸ್ತ್ರ ಧರಿಸಿ ಬರುವಂತಿಲ್ಲ. ಆಯಾ ಕಾಲೇಜುಗಳ SDMC ನಿಯಮಗಳನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಏ.22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, SSLC ಪರೀಕ್ಷೆಗೂ ನಿಯಮ ಹೊರಡಿಸಿದಂತೆ ಪಿಯುಸಿ ಪರೀಕ್ಷೆಗೂ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಮಾಹಿತಿ ನೀಡಿದ್ದಾರೆ.