ಉಡುಪಿ: ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಗೆ ಪ್ರವಾಸ ಬಂದಿದ್ದ ಕೇರಳದ ಮೂಲದ ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಗುರುವಾರ ನಡೆದಿದೆ.
ಅಲೆನ್ ರೇಜಿ, ಅಮಲ್ ಸಿ. ಅನಿಲ್, ಆ್ಯಂಟೋನಿ ಶೆಣೈ ನೀರುಪಾಲಾದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿವೆ. ಇನ್ನೋರ್ವ ವಿದ್ಯಾರ್ಥಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಕೊಟ್ಟಾಯಂನ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ 42 ಮಂದಿಯಿದ್ದ ತಂಡ ಮಲ್ಪೆಗೆ ಪ್ರವಾಸಕ್ಕೆಂದು ಬಂದಿತ್ತು. ವಿದ್ಯಾರ್ಥಿಗಳ ಜೊತೆ ಇಬ್ಬರು ಉಪನ್ಯಾಸಕರೂ ಇದ್ದರು. ನೀರನಲ್ಲಿ ಆಡುವಾಗ ಆಕಸ್ಮಿಕವಾಗಿ ಸಮುದ್ರದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ.