ಪುಣೆ: ಕಳೆದ ರಾತ್ರಿ ನಡೆದಿದ್ದ ಐಪಿಎಲ್ ಆವೃತ್ತಿಯ ಕೆಕೆಆರ್ – ಮುಂಬೈ ಪಂದ್ಯದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಮುಂಬೈ ಇಂಡಿಯನ್ಸ್ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಕೋಲ್ಕತ್ತ ನೈಟ್ ರೈಡರ್ಸ್ ಬ್ಯಾಟ್ಸ್‌ಮನ್ ನಿತೀಶ್ ರಾಣಾರಿಗೆ ದಂಡ ವಿಧಿಸಲಾಗಿದೆ.
ಜಸ್ಪ್ರೀತ್ ಬುಮ್ರಾ ಮತ್ತು ನಿತೀಶ್ ರಾಣಾ ಪುಣೆಯಲ್ಲಿ ಕಳೆದ ರಾತ್ರಿ ನಡೆದಿದ್ದ ಪಂದ್ಯದ ವೇಳೆ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ವಾಗ್ದಂಡನೆ ಹಾಗೂ ಪಂದ್ಯ ಶುಲ್ಕದ ಶೇ.10ರಷ್ಟು ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಪ್ರಕಟನೆಯಲ್ಲಿ ತಿಳಿಸಿದೆ. ಎರಡೂ ಆಟಗಾರರು ನೀತಿ ಸಂಹಿತೆಯ ಹಂತ ಒಂದನ್ನು ಉಲ್ಲಂಘನೆ ಮಾಡಿದ್ದಾರೆ.
ಪಂದ್ಯಾಟದಲ್ಲಿ ತೀರ್ಪುಗಾರರ ನಿರ್ಧಾರ ಅಂತಿಮವಾಗಿದ್ದು, ಆಟಗಾರರು ಆ ನಿರ್ಧಾರಕ್ಕೆ ಬದ್ಧವಾಗಿರಬೇಕಾಗಿರುತ್ತದೆ.