ಕರಾಚಿ: ರಾಷ್ಟ್ರೀಯ ಅಸೆಂಬ್ಲಿ ವಿಸರ್ಜಿಸಿದ್ದ ಡೆಪ್ಯೂಟಿ ಸ್ಪೀಕರ್ ನಿರ್ಧಾರ ಅಸಂವಿಧಾನಿಕ ಎಂದು ಪಾಕಿಸ್ತಾನ ಸುಪ್ರೀಂ ಕೋರ್ಟ್ ಹೇಳಿದ್ದು, ಏಪ್ರಿಲ್ 9ರಂದು ಬೆಳಗ್ಗೆ 10ರೊಳಗೆ ಬಹುಮತ ಸಾಬೀತುಪಡಿಸುವಂತೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ಸೂಚನೆಯನ್ನು ನೀಡಿದೆ.
ಚುನಾವಣೆ ಪ್ರಸ್ತಾವನೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಅಸೆಂಬ್ಲಿಯನ್ನು ಮರುಸ್ಥಾಪಿಸಿದೆ. ಅಲ್ಲದೇ, ಅವಿಶ್ವಾಸ ನಿರ್ಣಯ ಯಶಸ್ವಿಯಾದರೆ ಹೊಸ ಪ್ರಧಾನಿಯನ್ನು ಆಯ್ಕೆ ಮಾಡುವಂತೆ ಸೂಚಿಸಿದೆ.
ಬಹುಮತ ಸಾಬೀತುಪಡಿಸುವಂತೆ ಸೂಚಿಸಿರುವ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಶಹಬಾಜ್ ಷರೀಫ್, ತೀರ್ಪು ಪಾಕಿಸ್ತಾನವನ್ನು ಉಳಿಸಿದ್ದು, ಪಾಕಿಸ್ತಾನದ ಜನರ ಪ್ರಾರ್ಥನೆಯನ್ನು ಸ್ವೀಕರಿಸಲಾಗಿದೆ ಎಂದು ಹೇಳಿದ್ದಾರೆ.