ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಕಚೇರಿಯ ಅಧಿಕೃತ ಟ್ವಿಟರ್ ಶುಕ್ರವಾರ ತಡರಾತ್ರಿ ಹ್ಯಾಕ್ ಆಗಿದೆ.
ಹ್ಯಾಕರ್ ಗಳು ಮುಖ್ಯಮಂತ್ರಿ ಕಚೇರಿಯ ಖಾತೆಯಿಂದ 400-500 ಟ್ವೀಟ್ ಗಳನ್ನು ಮಾಡಿದ್ದರು ಎಂದು ತಿಳಿದು ಬಂದಿದೆ.
‘ರಾತ್ರಿ ಸುಮಾರು 29 ನಿಮಿಷಗಳ ಕಾಲ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಹ್ಯಾಕರ್ ಗಳು ಸುಮಾರು 400-500 ಟ್ವೀಟ್ ಗಳನ್ನು ಪೋಸ್ಟ್ ಮಾಡಿದ್ದರು ಮತ್ತು ಅಸ್ವಾಭಾವಿಕ ಚಟುವಟಿಕೆಯ ಆಧಾರದ ಮೇಲೆ ಖಾತೆಯನ್ನು ಅಮಾನತುಗೊಳಿಸಲಾಗಿತ್ತು’ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.