ಭೂಪಾಲ್: ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್ ಅವರ ಪ್ರತಿಕೃತಿ ದಹಿಸಿ ಮಧ್ಯ ಪ್ರದೇಶ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಯುಪಿಎ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆ ಹಾಗೂ ಹಣದುಬ್ಬರ ವಿರುದ್ದ ಟ್ವೀಟ್ ಮಾಡಿದ್ದ ಈ ನಟರು, ಇದೀಗ ಪೆಟ್ರೋಲ್, ಡೀಸೆಲ್ ಅಡುಗೆ ಅನಿಲ ಸತತವಾಗಿ ಏರುತ್ತಿದ್ದರೂ ಮೌನವಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
2021ರಲ್ಲಿ ಅಡುಗೆ ಅನಿಲದ ಬೆಲೆ ರೂ. 300 ರಿಂದ 400 ಹಾಗೂ ಲೀಟರ್ ಪೆಟ್ರೋಲ್ ಬೆಲೆ 60 ರೂ. ಇತ್ತು. ಅಂತಹ ಸಂದರ್ಭದಲ್ಲಿ ಕೇಂದ್ರದಲ್ಲಿದ್ದ ಯುಪಿಎ ಸರ್ಕಾರವನ್ನು ಟೀಕಿಸಿದ್ದ ಅಮಿತಾಭ್ ಬಚ್ಚನ್ ಹಾಗೂ ಅಕ್ಷಯ್ ಕುಮಾರ್, ವಾಹನಗಳನ್ನು ಖರೀದಿಸಬಹುದು ಆದರೆ, ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸಲು ಸಾಲದ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು. ಆದರೆ ಈಗ ಅಡುಗೆ ಅನಿಲ ಬೆಲೆ 1 ಸಾವಿರ ರೂಪಾಯಿಯಷ್ಟು ಏರಿಕೆಯಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 100 ರಿಂದ 120 ರೂ. ಆಗಿದೆ. ಆದರೆ ಇವರು ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಎಂಎಲ್ ಸಿ ಪಿ. ಸಿ. ಶರ್ಮಾ ಕಿಡಿಕಾರಿದ್ದಾರೆ.