ಧಾರವಾಡ: ಇಲ್ಲಿನ ನುಗ್ಗಿಕೇರಿ ಗ್ರಾಮದ ಹನುಮಂತ ದೇವಸ್ಥಾನದ ಹೊರಗಡೆ ಇರುವ ಮುಸ್ಲಿಂ ವ್ಯಾಪಾರಿ ನಬಿಸಾಬ್ ಅವರಿಗೆ ಸೇರಿದ್ದ ಕಲ್ಲಂಗಡಿ ಹಣ್ಣಿನ ಅಂಗಡಿಯನ್ನು ಧ್ವಂಸಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀರಾಮಸೇನೆಯ ಕಾರ್ಯಕರ್ತ ಮಹಾಲಿಂಗ ಐಗಳಿ ಎಂಬಾತನನ್ನು ಧಾರವಾಡ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.
ಕಲ್ಲಂಗಡಿ ಹಣ್ಣನ್ನು ರಸ್ತೆಗೆ ಚೆಲ್ಲಿ, ಒಡೆದು ಹಾಕಿದ ವೀಡಿಯೋ ಸಾಕಷ್ಟು ವೈರಲ್ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹಾಗೂ ರಾಜ್ಯ ಅಧ್ಯಕ್ಷ ಮುಹಮ್ಮದ್ ನಲಪಾಡ್ ನುಗ್ಗಿಕೇರಿಗೆ ಭೇಟಿ ನೀಡಿ ನಷ್ಟಕ್ಕೊಳಗಾದ ವ್ಯಾಪಾರಿಗಳಿಗೆ ಧೈರ್ಯ ತುಂಬಿದ್ದರು. ಇದೇ ವೇಳೆ ದಾಳಿಗೊಳಗಾದ ನಾಲ್ಕು ಅಂಗಡಿಗಳಿಗೆ ತಲಾ 25ಸಾವಿರ ಪರಿಹಾರ ನೀಡಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕೂಡ ಕಲ್ಲಂಗಡಿ ಹಣ್ಣಿನ ವ್ಯಾಪಾರಿಗೆ 10 ಸಾವಿರ ರೂ. ನೀಡಿದ್ದಾರೆ.